ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಸುವ 7ನೇ ವೇತನ ಆಯೋಗದ ಶಿಫಾರಸ್ಸನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಚಿವ ಸಂಪುಟದಲ್ಲಿ ಇಂದು ಅನುಮೋದನೆ ದೊರೆತಿದ್ದು, ಈ ಬಗ್ಗೆ ಅಧಿಕೃತ ಹೇಳಿಕೆ ಸಂಜೆ ಹೊರಬೀಳುವ ಸಾಧ್ಯತೆ ಇದೆ.

ಡಿಎ ಹೆಚ್ಚಳದಿಂದ ಸುಮಾರು 1 ಕೋಟಿ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದ್ದು, ಒಟ್ಟಾರೆ. ಶೇ.42ರಷ್ಟು ಡಿಎ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *