ಕಾರವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಬಾಗ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ 41 ವರ್ಷದ ಹಳೆಯ ಸೇತುವೆ ರಾತ್ರಿ 12 ಗಂಟೆ ಸುಮಾರಿಗೆ ಕುಸಿದು ಬಿದ್ದಿದೆ.
ಸೇತುವೆ ಮೇಲೆ ಸಂಚರಿಸುತ್ತಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್ 31ವರ್ಷ, ಸಮೇತ ಕಾಲಿ ಟ್ರಕ್ ಕಾಳಿ ನದಿಗೆ ಬಿದ್ದಿದೆ ಲಾರಿಯ ಮುಂಭಾಗದಲ್ಲಿದ್ದ ಗ್ಲಾಸ್ ಒಡೆದು ಕ್ಯಾಬಿನ್ ಮೇಲೆ ನಿಂತು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದು ರಾತ್ರಿ ವೇಳೆ ಗಸ್ತುತಿರುಗುತ್ತಿದ್ದ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದಾರೆ ಯಾವುದೇ ಸಾವು ನೋವು ಸಂಭವಿಸಿಲ್ಲ