ED raid:  ಇಡಿ ಕಸ್ಟಡಿಯಲ್ಲಿದ್ದ ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು

ED raid: ಇಡಿ ಕಸ್ಟಡಿಯಲ್ಲಿದ್ದ ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು

ಇಡಿ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಳ್ಳುವಾಗ ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿ ಎದೆನೋವು ಎಂದು ಹೇಳಿದರು. ಆದರೂ ಇಡಿ ಆಸ್ಪತ್ರೆಗೆ ಕರೆದೊಯ್ದಾಗ ಅವರಿಗೆ ಪ್ರಜ್ಞೆ ಇರಲಿಲ್ಲ ಎಂದು ಡಿಎಂಕೆ ಮುಖಂಡರು ಆರೋಪಿಸಿದ್ದಾರೆ.

ಚೆನ್ನೈ (ತಮಿಳುನಾಡು): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ( ಇಡಿ ) ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ತನಿಖಾ ಸಂಸ್ಥೆ ಮಂಗಳವಾರ ಡಿಎಂಕೆ ನಾಯಕನ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಅವರನ್ನು ವಿಚಾರಣೆಗೆ ಕರೆದೊಯ್ದಿದೆ.

ಇದರ ಬೆನ್ನಲ್ಲೇ ಇಡಿ ಬುಧವಾರ ಬೆಳ್ಳಂಬೆಳಗ್ಗೆ ಬಿಗಿ ಭದ್ರತೆಯ ನಡುವೆ ಬಾಲಾಜಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದೆ. ಡಿಎಂಕೆ ನಾಯಕನನ್ನು ಆಸ್ಪತ್ರೆಗೆ ಕರೆತರುತ್ತಿದ್ದಂತೆಯೇ ಆಸ್ಪತ್ರೆಯ ಹೊರಗೆ ಭಾರಿ ಹೈಡ್ರಾಮ ಕೂಡಾ ನಡೆದಿದೆ. ಇಡಿ ಕ್ರಮವನ್ನು ವಿರೋಧಿಸಿ ಅವರ ಬೆಂಬಲಿಗರು ಅಲ್ಲಿ ಜಮಾಯಿಸಿದರು. ಆಗ ಕಾರಿನಲ್ಲಿ ಮಲಗಿದ್ದ ಸೆಂಥಿಲ್ ಬಾಲಾಜಿ ಎದೆನೋವು ಎಂದು ಅಳುತ್ತಿರುವುದನ್ನು ಕಾಣಬಹುದು.

“ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ ಮತ್ತು ಬಾಲಾಜಿ ಬಂಧನವನ್ನು ಇಡಿ ಅಧಿಕೃತವಾಗಿ ಖಚಿತಪಡಿಸಿಲ್ಲ ಎಂದು ಡಿಎಂಕೆ ಸಂಸದ ಮತ್ತು ವಕೀಲ ಎನ್‌ಆರ್ ಎಲಾಂಗೋ ಹೇಳಿದ್ದಾರೆ. ನಾನು ಅವರನ್ನು (ಸೆಂಥಿಲ್ ಬಾಲಾಜಿ) ಐಸಿಯುಗೆ ಸ್ಥಳಾಂತರಿಸಿದಾಗ ನೋಡಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸುತ್ತಿದ್ದಾರೆ. ಒಬ್ಬ ವ್ಯಕ್ತಿ ತನ್ನ ಮೇಲೆ ಹಲ್ಲೆಯಾಗಿದೆ ಎಂದು ಹೇಳಿದಾಗ ವೈದ್ಯರು ಗಾಯವಾಗಿರುವ ಬಗ್ಗೆ ಪರೀಕ್ಷಿಸಬೇಕಾಗುತ್ತದೆ. ವರದಿಯನ್ನು ನೋಡಿದ ನಂತರ ಎಲ್ಲವೂ ತಿಳಿಯುತ್ತದೆ” ಎಲಾಂಗೋ ಹೇಳಿದರು.

ಸೆಂಥಿಲ್ ಬಾಲಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ” ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆದರಿಕೆ ರಾಜಕೀಯಕ್ಕೆ ನಾವು ಹೆದರುವುದಿಲ್ಲ” ಎಂದು ಅವರು ಹೇಳಿದರು.

ಇಡಿ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಳ್ಳುವಾಗ ಬಾಲಾಜಿ ಎದೆನೋವು ಎಂದು ಹೇಳಿದರು. ಆದರೆ, ಇಡಿ ಆಸ್ಪತ್ರೆಗೆ ಕರೆದೊಯ್ದಾಗ ಸೆಂಥಿಲ್ ಬಾಲಾಜಿಗೆ ಪ್ರಜ್ಞೆ ಇರಲಿಲ್ಲ ಎಂದು ಡಿಎಂಕೆ ಮುಖಂಡರು ಆರೋಪಿಸಿದ್ದಾರೆ. ಈ ಮಧ್ಯೆ, ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವ ಉದ್ಯನಿತಿ ಸ್ಟಾಲಿನ್, ಆರೋಗ್ಯ ಸಚಿವ ಎಂ.ಸುಬ್ರಮಣಿಯನ್, ಲೋಕೋಪಯೋಗಿ ಮತ್ತು ಹೆದ್ದಾರಿ ಸಚಿವ ಇವಿ ವೇಲು, ಮಾನವ ಸಂಪನ್ಮೂಲ ಮತ್ತು ಸಿಇ ಸಚಿವ ಸೇಕರ್ ಬಾಬು ಮತ್ತು ವಿವಿಧ ಡಿಎಂಕೆ ಬೆಂಬಲಿಗರು ಸೆಂಥಿಲ್ ಬಾಲಾಜಿ ಅವರನ್ನು ಭೇಟಿ ಮಾಡಲು ಆಸ್ಪತ್ರೆಗೆ ಆಗಮಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಂಗಳವಾರ ಬಾಲಾಜಿ ಅವರ ಕರೂರ್ ನಿವಾಸ ಮತ್ತು ರಾಜ್ಯ ಸಚಿವಾಲಯದ ಅವರ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದರ ಜತೆಗೆ ಕರೂರಿನಲ್ಲಿರುವ ಅವರ ಸಹೋದರ ಮತ್ತು ಆಪ್ತ ಸಹಾಯಕನ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ವಿ ಸೆಂಥಿಲ್ ಬಾಲಾಜಿ, ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದಲ್ಲಿ ವಿದ್ಯುತ್ ಮತ್ತು ಅಬಕಾರಿ ಸಚಿವರಾಗಿದ್ದಾರೆ.

Leave a Reply

Your email address will not be published. Required fields are marked *