ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂದರಿ ಕೊಪ್ಪಲನಲ್ಲಿ ಗಣೇಶೋತ್ಸವ ಮೆರವಣಿಗೆಯ ವೇಳೆ ಅನ್ಯಕೋಮಿನ ಯುವಕರು ಕಲ್ಲು ಚಪ್ಪಲಿ ತೂರಿ ಮಾರಕಸ್ತ್ರ ಮತ್ತು ಪೆಟ್ರೋಲ್ ಬಾಂಬ ದಾಳಿ ಮಾಡಿದ್ದು ಮತ್ತು ತಡರಾತ್ರಿ ಅಂಗಡಿ ಮುಗ್ಗಟ್ಟುಗಳಿಗೆ ಬೆಂಕಿ ಹಚ್ಚಿ ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸರ ಮೇಲೆಯೂ ಅಲ್ಲೇ ಮಾಡಲಾಗಿದೆ,
ಈ ಕುರಿತಾಗಿ ರಾಜ್ಯ ಸರ್ಕಾರ ಸೂಕ್ತ ಕಾನೂನು ಕ್ರಮವನ್ನು ವಹಿಸುವಂತೆ ಮತ್ತು ಈ ಉಗ್ರ ಚಟುವಟಿಕೆಗಳ ಹಿಂದಿನ ಮೂಲ ಉದ್ದೇಶ ಮತ್ತು ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮವನ್ನು ಜರುಗಿಸುವಂತೆ ಹಾಗೂ ಈ ರೀತಿಯ ಚಟುವಟಿಕೆಗೆ ರಾಜ್ಯದಲ್ಲಿ ಇನ್ನು ಮುಂದೆ ನಡೆಯದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಚಿಕ್ಕಬಳ್ಳಾಪುರ ಅಪಾರ ಜಿಲ್ಲಾಧಿಕಾರಿಗಳಾದ ಭಾಸ್ಕರ್ ರವರ ಮುಖಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಾಗಮಂಗಲ ಗಲಭೆ ವಿಚಾರದಲ್ಲಿ ಸಂಬಂಧಪಟ್ಟಂತೆ ಅಮಾಯಕರನ್ನು ಬಿಟ್ಟು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಜರಂಗಿ ದಳದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ