Free Bus: ಹೆಚ್ಚಾದ ಮಹಿಳಾ ಪ್ರಯಾಣಿಕರ ಸಂಖ್ಯೆ; ಪ್ರತ್ಯೇಕ ಬಸ್​ಗೆ ಪುರುಷರು ಆಗ್ರಹ

Free Bus: ಹೆಚ್ಚಾದ ಮಹಿಳಾ ಪ್ರಯಾಣಿಕರ ಸಂಖ್ಯೆ; ಪ್ರತ್ಯೇಕ ಬಸ್​ಗೆ ಪುರುಷರು ಆಗ್ರಹ

  ಭಾನುವಾರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದರು.

ಭಾನುವಾರ ಮಧ್ಯಾಹ್ನದಿಂದಲೇ ಮಹಿಳೆಯರ ಉಚಿತ ಪ್ರಯಾಣ ಆರಂಭವಗೊಂಡಿದೆ.


ಭಾನುವಾರ ರಜಾ ದಿನವಾಗಿದ್ದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಇಂದು ಬೆಳ್ಳಂಬೆಳಗ್ಗೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.


ಉಚಿತ ಪ್ರಯಾಣವಾದ್ರೂ ಮಹಿಳಾ ಪ್ರಯಾಣಿಕರಿಗೆ ಶೂನ್ಯ ದರದ ಟಿಕೆಟ್ ವಿತರಣೆ ಮಾಡಬೇಕು. ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ನಿರ್ವಾಹಕರುಇ ಮಾರ್ಗ ಮಧ್ಯೆಯೇ ಬಸ್ ನಿಲ್ಲಿಸಿ ಟಿಕೆಟ್ ವಿತರಿಸುತ್ತಿದ್ದಾರೆ.


ವಾಡಿಕೆಗಿಂತ ಇಂದು ಬಿಎಂಟಿಸಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರಿಂದ ಪುರುಷರು ಬಾಗಿಲಿನಲ್ಲಿಯೇ ನಿಂತು ಪ್ರಯಾಣಿಸುವಂತಾಗಿದೆ.


ಹಣ ಕೊಟ್ರು ನಾವು ನಿಂತುಕೊಂಡು ಹೋಗಬೇಕಾಗಿದೆ ಎಂದು ಪುರುಷ ಪ್ರಯಾಣಿಕರು ಬೇಸರ ಹೊರ ಹಾಕಿದ್ದಾರೆ. ಮಹಿಳಾ ಪ್ರಯಾಣಿಕರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕೆಂದು ಪುರುಷ ಪ್ರಯಾಣಿಕರು ಆಗ್ರಹಿಸಿದ್ದಾರೆ.


ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಜುಲೈ 1 ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೆವು.. ಅದರಂತೆ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ.

Leave a Reply

Your email address will not be published. Required fields are marked *