ಬೆಂಗಳೂರು: ಮೊದಲ ಗ್ಯಾರಂಟಿಯಾಗಿರುವ ಗೃಹಜ್ಯೋತಿ (Gruha Jyothi Scheme) ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ. ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿತ ಪ್ರಮಾಣದಷ್ಟು ವಿದ್ಯುತ್ ಬಳಸಿದರೆ ಬಿಲ್ಲ ಕಟ್ಟುವಂತಿಲ್ಲ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ ಶೇ 10 ರಷ್ಟು ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. ಆದರೆ ಹಿಂದಿನ ತಿಂಗಳಲ್ಲಿ ಬಾಕಿ ಇರಿಸಿರುವ ವಿದ್ಯುತ್ ಬಿಲ್ ಅನ್ನು ಗ್ರಾಹಕರು ಕಟ್ಟಬೇಕು ಎಂದರು.

ಜನರಿಗೆ ಕೊಟ್ಟಿ ಮೊದಲ ವಾಗ್ದಾನದಲ್ಲಿ ಗೃಹಜ್ಯೋತಿ ಮೊದಲನೆಯದ್ದು. ಪ್ರತಿ ಮನೆಗೆ 200 ಯುನಿಟ್ ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದ್ದೇವು. ಈ ಗ್ಯಾರಂಟಿಯನ್ನು ಜಾರಿ ಮಾಡಬೇಕು ಎಂದು ತೀರ್ಮಾನಿಸಿದ್ದೇವೆ. ಸುದೀರ್ಘವಾಗಿ ಐದು ಗ್ಯಾರಂಟಿಗಳ ಬಗ್ಗೆ ಚರ್ಚೆ ನಡೆಸಿ ಐದೂ ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ. ಎಲ್ಲಾ ಜಾತಿ, ಧರ್ಮ, ಭಾಷಿಕರಿಗೆ ಗ್ಯಾರಂಟಿಗಳನ್ನು ತಲುಪಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Leave a Reply

Your email address will not be published. Required fields are marked *