ಎರಡು ದಿನಗಳ ಹಿಂದೆಯಷ್ಟೇ ನೇಪಾಳದಲ್ಲಿ 157 ಜನರನ್ನು ಬಲಿ ಪಡೆದಿದ್ದ ಭೂಕಂಪನ ಮತ್ತೆ ಕಾಣಿಸಿಕೊಂಡಿದೆ.

ನೇಪಾಳ ರಾಜಧಾನಿ ಕಠ್ಮಂಡುವಿನಿಂದ 500 ಕಿ.ಮೀ. ದೂರದಲ್ಲಿ ಶುಕ್ರವಾರ ತಡರಾತ್ರಿ 6.4ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಇದರಿಂದ 157ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಸೋಮವಾರ ಸಂಜೆ 4.18ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.6ರ ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ.

ಇದರ ನಡುವೆ ದೆಹಲಿಯಲ್ಲೂ ಭೂಮಿ ಕಂಪಿಸಿದ್ದು, ಜನರು ಕಟ್ಟಡಗಳಿಂದ ಹೊರಗೆ ಓಡಿ ಬಂದು ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದರು.

Leave a Reply

Your email address will not be published. Required fields are marked *