ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರಗಿಯಲ್ಲಿ ಗುರುವಾರ ಸಂಭವಿಸಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಗುರುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ದುದನಿಯಿಂದ ಅಫಜಲಪೂರ ಕಡೆಗೆ ಬರುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಮೃತಪಟ್ಟವರೆಲ್ಲರೂ ಅಫ್ಜಲಪುರದಲ್ಲಿ ಫಾಸ್ಟ್ ಫುಡ್ ಹೋಟೆಲ್ ನಡೆಸುತ್ತಿದ್ದರು. ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪೂರದಲ್ಲಿ ವಾಸವಿತ್ತು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *