ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು(Five Guarantees Schemes ಮುಖ್ಯಮಂತ್ರಿ ಸಿದ್ದರಾಮಯ್ಯನವರು(Siddaramaiah) ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು. ಇಂದು(ಜೂನ್ 02) ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆ ಜಾರಿ ಬಗ್ಗೆ ವಿವರಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿ 1: ಗೃಹಜ್ಯೋತಿ ಜಾರಿಗೆ

ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು.  12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್​ 1ರವರೆಗೆ ಬಳಸುವ ವಿದ್ಯುತ್​ ಬಳಕೆಗೆ ಬಿಲ್​  ಎಂದು ತಿಳಿಸಿದರು.

ಗ್ಯಾರಂಟಿ 2: ಗೃಹಲಕ್ಷ್ಮೀ ಯೋಜನೆ

ಮನೆ ಯಜಮಾನಿಗೆ ತಿಂಗಳಿಗೆ 2000 ರೂ. ಜಮಾ ಮಾಡುತ್ತೇವೆ. ಹಾಗಾಗಿ ಈಗ ಅವರು ಅಕೌಂಟ್ ನಂಬರ್, ಆಧಾರ್ ಕಾರ್ಡ್ ಕೊಡಬೇಕು. ಅಲ್ಲದೇ ಇದಕ್ಕೆ ಆನ್​ಲೈನ್​ ಅರ್ಜಿ ಸಲ್ಲಿಸಬೇಕು. ಜೂನ್ 15ರಿಂದ ಜುಲೈ 15ರ ವರೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ದಾಖಲೆಗಳನ್ನು ಪರಿಶೀಲಿಸಿ ಆಗಸ್ಟ್ 15ರಿಂದ ಮನೆ ಯಜಮಾನಿ ಬ್ಯಾಂಕ್​​ ಖಾತೆಗೆ ಹಣ ಹಾಕಲಾಗುವುದು. ಇದು ಬಿಪಿಎಲ್​ ಹಾಗೂ ಎಪಿಲ್ ಕಾರ್ಡುದಾರರಿಗೆ ಅನ್ವಯವಾಗಲಿದೆ ಎಂದರು.

ಮನೆ ಯಜಮಾನಿ ಯಾರು ಎಂದು ಮನೆಯವರೇ ಹೇಳಿ ಅರ್ಜಿ ಸಲ್ಲಿಸಬೇಕು. ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಗೃಹ ಲಕ್ಷ್ಮೀ ಆಗಸ್ಟ್ ನಿಂದ ಜಾರಿ ಮಾಡಲಾಗುತ್ತದೆ. ಈಗಾಗಲೇ ಪಿಂಚಣಿ ಪಡೆಯುತ್ತಿರುವವರಿಗೂ ಗೃಹ ಲಕ್ಷ್ಮೀ ಯೋಜನೆ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದರು. ಅಂದರೆ ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವೀಕಲಕರಿಗೆ ಈಗಾಲೇ ಬರುತ್ತಿರುವ ಪಿಂಚಣಿ ಜೊತೆಗೆ ಈ ಎರಡು ಸಾವಿರ ರೂಪಾಯಿ ಮನೆ ಯಜಮಾನಿಗೆ ಸಿಗಲಿದೆ ಎಂದು ಹೇಳಿದರು.

ಗ್ಯಾರಂಟಿ 3: ಅನ್ನಭಾಗ್ಯ ಯೋಜನೆ

ಜುಲೈ 1ರಿಂದ ಎಲ್ಲಾ ಬಿಪಿಎಲ್​ ಕಾರ್ಡುದಾರರಿಗೆ 10 ಕೆಜಿ ಆಹಾರಧಾನ್ಯ ವಿತರಿಸುತ್ತೇವೆ. ಈಗಲೇ 10 ಕೆ.ಜಿ ಅಕ್ಕಿ  ನೀಡಲು ನಮ್ಮಲ್ಲಿ ದಾಸ್ತಾನು ಇಲ್ಲ, ಹೀಗಾಗಿ ಆಹಾರಧಾನ್ಯ ನೀಡುತ್ತೇವೆ.

ಗ್ಯಾರಂಟಿ 4: ಉಚಿತ ಬಸ್ ಯೋಜನೆ

ಇನ್ನು ಉಚಿತ ಬಸ್ ಯೋಜನೆ ಅಡಿಯಲ್ಲಿ ಎಲ್ಲಾ ಅಂದರೆ ವಿದ್ಯಾರ್ಥಿನಿಯರು ಸೇರಿದಂತೆ ಮಹಿಳೆರಿಗೆ ಜೂನ್ 11ರಿಂದ ಉಚಿತ ಬಸ್ ಪ್ರಯಾಣ ಮಾಡಬಹುದು. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ಇನ್ನುಳಿದಂತೆ ರಾಜಹಂಸ,  ಕೆಎಸ್​ಆರ್​ಟಿಸಿಯ ಎಲ್ಲಾ ಎಕ್ಸ್​ಪ್ರೆಸ್, ಬಿಎಂಟಿಸಿ ಬಸ್​ಗಳಲ್ಲಿ ಕರ್ನಾಟಕದೊಳಗೆ ಪ್ರಯಾಣಿಸಬಹುದು.

ಗ್ಯಾರಂಟಿ 5: ಯುವ ನಿಧಿ

2022-23ರ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಉತ್ತೀರ್ಣರಾಗಿ ನಿರುದ್ಯೋಗಿಗಳಾಗಿದ್ದರೆ ಅಂತವರಿಗೆ ‘ಯುವನಿಧಿ’ ಯೋಜನೆ ಅಡಿಯಲ್ಲಿ ತಿಂಗಳಿಗೆ 3000 ರೂ. ನೀಡಲಾಗುತ್ತದೆ. ಬಿಎ, ಬಿಎಸ್​ಸಿಸ, ಬಿಕಾಂ ಪದವೀಧರ 18ರಿಂದ 25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಯುವನಿಧಿ ಲಾಭ ಸಿಗಲಿದೆ.

2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿರುವ ಎಲ್ಲಾ ಪದವೀಧರರಿಗೆ 24 ತಿಂಗಳವರೆಗೆ ಪ್ರತಿ ತಿಂಗಳು 3000 ರೂ.ಡಿಪ್ಲೋಮಾ ಹೋಲ್ಡರ್ಸ್ ಗೆ 1500 ಪಾವತಿ ಮಾಡಲಾಗುತ್ತದೆ. 24 ತಿಂಗಳ ಒಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಆಗ ಹಣ ಪಾವತಿ‌ ಇಲ್ಲ. ನಿರುದ್ಯೋಗಿ ಎಂದು ಅರ್ಜಿ ಹಾಕಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಹಣ ಸಿಗಲಿದೆ . ನೋಂದಣಿ ಮಾಡಿಕೊಂಡ 24 ತಿಂಗಳವರೆಗೆ ಪಾವತಿ ಮಾಡಲಾಗುತ್ತಿದ್ದು, ಟ್ರಾನ್ಸ್ ಜೆಂಡರ್ಸ್ ಗೆ ಕೂಡಾ ಯುವ ನಿಧಿ ಅನ್ವಯವಾಗಲಿದೆ. ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

  • ಪದವಿ, ಸ್ನಾತಕೋತ್ತರ ಪದವೀಧರರಿಗೆ ‘ಯುವನಿಧಿ’ ಯೋಜನೆ
  • ಪದವಿ ಪಡೆದ ನಂತರ ನೋಂದಾಯಿಸಿಕೊಂಡವರಿಗೆ ಯೋಜನೆ
  •  24 ತಿಂಗಳು ಮಾಸಿಕ 3 ಸಾವಿರ ರೂಪಾಯಿ ನೀಡುತ್ತೇವೆ
  • 2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’
  • ನಿರುದ್ಯೋಗ ಪದವೀಧರರಿಗೆ ಮಾಸಿಕ 3 ಸಾವಿರ ರೂ. ನೀಡಲಾಗುತ್ತದೆ
  • ಡಿಪ್ಲೋಮಾ ಪದವೀಧರರಿಗೆ ಮಾಸಿಕ 1,500 ರೂ.
  • ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ‘ಯುವನಿಧಿ’ ಲಾಭ
  • 18ರಿಂದ 25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಯುವನಿಧಿ’ ಜಾರಿ
  • ಯುವ ನಿಧಿ ಅರ್ಜಿ ಸಲ್ಲಿಕೆಗೆ ಅರ್ಜಿ ಕರೆದ 6 ತಿಂಗಳವರೆಗೆ ಅವಕಾಶ
  • ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ
  • 24 ತಿಂಗಳೊಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಇಲ್ಲ
  • ಅಂಥವರಿಗೆ ಯುವನಿಧಿ ಯೋಜನೆ ಹಣ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *