ಈ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆ
ಈ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15ರವರೆಗೂ ಭಾರಿ RAIN ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕೊಲ್ಲೂರು, ಕಾರ್ಕಳ, ಮಂಗಳೂರು, ಕೋಟ, ಶಿರಾಲಿ, ಉಡುಪಿ, ಅಂಕೋಲಾ, ಚಿಂಚೋಳಿ, ಕೊಟ್ಟಿಗೆಹಾರ, ಕುಂದಾಪುರ, ಬೇಲಿಕೇರಿ, ಕುಕನೂರು, ರೋಣ, ಗೋಕರ್ಣ, ಮುಧೋಳ, ಚಿಕ್ಕನಹಳ್ಳಿ, ಯುಗಟಿಯಲ್ಲಿ ಮಳೆಯಾಗಿದೆ.
ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಣಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ರಾಜಸ್ಥಾನ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಎಫೆಕ್ಟ್ ರಾಜ್ಯದ 9 ಜಿಲ್ಲೆಗಳಿಗೆ ತಟ್ಟಲಿದೆ. ಮುಂದಿನ 3 ದಿನಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30-40 ಕಿಮೀ ತಲುಪಬಹುದು ಎಂದು ಎಚ್ಚರಿಸಿದೆ.