ಆದಾಯ ಮೀರಿ ಆಸ್ತಿ ಗಳಿಕೆ: ಡಿಕೆಶಿ ವಿರುದ್ಧದ ಸಿಬಿಐ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ಸುದೀರ್ಘ…

ಜೆಡಿಎಸ್‌ ನಿಂದ ಸಿಎಂ ಇಬ್ರಾಹಿಂ ಉ‍ಚ್ಛಾಟನೆ: ಮಾಜಿ ಪ್ರಧಾನಿ ದೇವೇಗೌಡ ಘೋಷಣೆ

ಪಕ್ಷದ ತೀರ್ಮಾನ ವಿರುದ್ಧ ಬಂಡಾಯ ಘೋಷಿಸಿದ್ದ ಸಿಎಂ ಇಬ್ರಾಹಿಂ ಅವರನ್ನು ಗೌರವಯುತವಾಗಿ ಜೆಡಿಎಸ್‌ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯ ನಂತರ…

ಪತ್ರಕರ್ತೆ ಸೌಮ್ಯ ವಿಶ್ವನಾಥನ್‌ ಹತ್ಯೆ ಪ್ರಕರಣ: 15 ವರ್ಷಗಳ ನಂತರ ಕೊಲೆಗಾರರಿಗೆ ಶಿಕ್ಷೆ

2008ರಲ್ಲಿ ನಡೆದ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ದೆಹಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಈ ಮೂಲಕ 15 ವರ್ಷಗಳ ನಂತರ ಪತ್ರಕರ್ತೆ ಸೌಮ್ಯ ಕುಟುಂಬದವರಿಗೆ ನ್ಯಾಯ ಲಭಿಸಿದಂತಾಗಿದೆ. 2008 ಸೆಪ್ಟೆಂಬರ್‌ 30ರಂದು 25 ವರ್ಷದ ಹೆಡ್‌ ಲೈನ್ಸ್…

ಇಂಧನ ಕೊರತೆ:  ಪಾಕಿಸ್ತಾನದ 48 ವಿಮಾನ ಹಾರಾಟ ರದ್ದು

ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿರುವ ಪಾಕಿಸ್ತಾನದಲ್ಲಿ ಇದೀಗ ಇಂಧನ ಕೊರತೆ ಕಾಡುತ್ತಿದ್ದು, 48 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಇಂಧನ ಕೊರತೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಅಂತಾರಾಷ್ಟ್ರೀಯ ಏರ್‌ ಲೈನ್ಸ್‌ ನ ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ 48 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಇಂಧನ ಸಂಗ್ರಹ…

7ನೇ ವೇತನ ಆಯೋಗ ಶಿಫಾರಸು: ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಪುಟ ಅಸ್ತು

ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಸುವ 7ನೇ ವೇತನ ಆಯೋಗದ ಶಿಫಾರಸ್ಸನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟದಲ್ಲಿ ಇಂದು ಅನುಮೋದನೆ ದೊರೆತಿದ್ದು, ಈ ಬಗ್ಗೆ ಅಧಿಕೃತ ಹೇಳಿಕೆ ಸಂಜೆ ಹೊರಬೀಳುವ ಸಾಧ್ಯತೆ ಇದೆ.…

ಬಾಂಬ್‌ ದಾಳಿ ನಿಲ್ಲಿಸಿದರೆ ಒತ್ತೆಯಾಳು ಬಿಡುಗಡೆ: ಗಾಜಾ ಉಗ್ರರ ಷರತ್ತು

ಗಾಜಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ನಿಲ್ಲಿಸಿದರೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್‌ ಉಗ್ರರು ಷರತ್ತು ವಿಧಿಸಿದ್ದಾರೆ. ಇಸ್ರೇಲ್‌ ನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು 250ಕ್ಕೂ ಅಧಿಕ ನಾಗರಿಕರನ್ನು ಹಮಾಸ್‌ ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಅಲ್ಲದೇ ಒತ್ತೆಯಾಳಾಗಿ ಇರಿಸಿಕೊಂಡಿದ್ದ…

ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿ ಸ್ಫೋಟ: ಅಗ್ನಿ ಅವಘಡಕ್ಕೆ ಬೆಚ್ಚಿದ ಜನ!

ಬೆಂಗಳೂರಿನ ಕೋರಮಂಗಲದ ಬಹುಮಹಡಿ ಕಟ್ಟಡದಲ್ಲಿ ಭಾರೀ ಸ್ಫೋಟವುಂಟಾಗಿದ್ದು, ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ. ಕೋರಮಂಗಲದ ಮಡ್‌ ಪೈಪ್‌ ಕಟ್ಟಡದ ಮೇಲಂತಸ್ತಿನಲ್ಲಿ ಮಂಗಳವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ. ಮಹಡಿ ಮೇಲೆ 5 ಸಿಲಿಂಡರ್‌ ಇರಿಸಲಾಗಿತ್ತು. ಇದು…

ಜೀವನ ಭೀಮಾನಗರ ಮಹಿಳಾ ಟೆಕ್ಕಿ ಕೊಲೆ ಪ್ರಕರಣ: 3 ರಾಜ್ಯಗಳನ್ನ ಸುತ್ತಿದ್ದ ಪ್ರಿಯಕರ ಕೊನೆಗೆ ಬೆಂಗಳೂರಿನಲ್ಲಿ ಲಾಕ್​

ಜೂನ್ 5 ರಂದು ನಡೆದಿದ್ದ ಜೀವನ ಭೀಮಾನಗರ ಟೆಕ್ಕಿ ಆಕಾಂಕ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಪಿತ್ ಇದೀಗ ಅರೆಸ್ಟ್​ ಆಗಿದ್ದಾನೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಮೂರು ರಾಜ್ಯಗಳನ್ನ ಸುತ್ತಿದ್ದವ ಕೊನೆಗೆ ಬೆಂಗಳೂರಿನಲ್ಲಿ ಲಾಕ್​ ಆಗಿದ್ದಾನೆ. ಬೆಂಗಳೂರು: ಜೂನ್ 5 ರಂದು ನಡೆದಿದ್ದ…

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸಾವು; ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೊರ್ವಳು, ಕಾಲೇಜಿನ ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಚಿಕ್ಕಬಳ್ಳಾಫುರ: ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಕ್ಷುಲ್ಲಕ…