ಮಧ್ಯಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ನಂತರ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಕಾಂಗ್ರೆಸ್ ಮುಖಂಡರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಮತ್ತು ಮೇಲ್ಮನೆ ಸದಸ್ಯರಿಗೆ ನಿಗಮ ಮಂಡಳಿಗೆ ನೇಮಕ ಮಾಡುವಾಗ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಪಕ್ಷದಲ್ಲಿನ ಆಂತರಿಕ ವಿಷಯ ಹಾಗೂ ನಿಗಮ –ಮಂಡಳಿ ನೇಮಕ ಸೇರಿದಂತೆ ರಾಜಕೀಯ ವಿಚಾರಗಳ ಬಗ್ಗೆ ಯಾವುದೇ ಸಚಿವರು ಹಾಗೂ ಶಾಸಕರು ಹೇಳಿಕೆ ನೀಡಬಾರದು ಎಂದು ಸುರ್ಜೆವಾಲಾ ಸೂಚನೆ ನೀಡಿದ್ದಾರೆ.
ಸಚಿವರು ತಮ್ಮ ಖಾತೆಯ ಅಭಿವೃದ್ಧಿ ವಿಷಯಗಳನ್ನಷ್ಟೇ ಮಾತನಾಡಬೇಕು. ಅನಗತ್ಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಬಾರದು ಎಂದು ಅವರು ಹೇಳಿದರು.