ಕರ್ನಾಟಕ ಸರ್ಕಾರ ಬರ ಪರಿಹಾರ ಹಣ (Drought relief fund ) ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು (ನವೆಂಬರ್ 03) 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.

ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಲ ರೈತರು ಬೆಳೆದಿದ್ದರೂ ನೀರಿನ ಕೊರತೆಯಿಂದ ಬೆಳೆ ಒಣಗಿ ಹೋಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದರಿಂದ ಹಲವು ರೈತ ಸಂಘಟನೆಗಳು ಬೆಳೆ ಪರಿಹಾರ ಘೋಷಣೆ ಮಾಡಿಬೇಕೆಂದು ಆಗ್ರಹಿಸಿದ್ದವು. ಅದರಂತೆ ಇದೀಗ ರಾಜ್ಯ ಸರ್ಕಾರ ಬೆಳೆ ಪರಿಹಾರಕ್ಕೆ ಅನುದಾನ ರಿಲೀಸ್ ಮಾಡಿದ್ದು, ಬೆಳೆ ಕಳೆದುಕೊಂಡು ಕಂಗಾಲಾಗಿರುವ ಅರ್ಹ ರೈತರಿಗೆ ಸರ್ಕಾರದ ಬರ ಪರಿಹಾರ ಸಿಗಲಿದೆ.

ಆರ್ಥಿಕ ಇಲಾಖೆಯಿಂದ ಆಯಾ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಆಗಿದ್ದು, ಬೆಳಗಾವಿ ಜಿಲ್ಲೆಗೆ 22.50 ಕೋಟಿ ರೂ, ವಿಜಯಪುರ ಜಿಲ್ಲೆಗೆ 18.00 ಕೋಟಿ, ದಕ್ಷಿಣ ಕನ್ನಡ ಜಿಲ್ಲೆಗೆ 3 ಕೋಟಿ ಹಾಗೂ ಉಡುಪಿಗೆ 4.5 ಕೋಟಿ ಮತ್ತು ಬೀದರ್ 4.5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *