ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ( ಎನ್‌ಎಲ್‌ಎಸ್‌ಐಯು ) 19 ವರ್ಷದ ವಿದ್ಯಾರ್ಥಿಯೊಬ್ಬ ಗುರುವಾರ ಇಲ್ಲಿನ ಅತ್ತಿಗುಪ್ಪೆ ನಿಲ್ದಾಣದಲ್ಲಿ ಮೆಟ್ರೊ ರೈಲಿನ ಮುಂದೆ ಜಿಗಿದು ತನ್ನ ಜೀವನವನ್ನು ಅಂತ್ಯಗೊಳಿಸಿಕೊಂಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಮೃತನನ್ನು ಮುಂಬೈ ಮೂಲದ ಪ್ರಥಮ ವರ್ಷದ ವಿದ್ಯಾರ್ಥಿ ಧ್ರುವ ಜತಿನ್ ಠಕ್ಕರ್ ಎಂದು ಗುರುತಿಸಲಾಗಿದೆ. ಸಾವಿನ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ, ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಚಲ್ಲಘಟ್ಟ ನಡುವಿನ ನಮ್ಮ ಮೆಟ್ರೋ ಸೇವೆ ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತು.

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನ ಅಧಿಕಾರಿಗಳ ಪ್ರಕಾರ , ಮಧ್ಯಾಹ್ನ 2.10 ರ ಸುಮಾರಿಗೆ ಪ್ಲಾಟ್‌ಫಾರ್ಮ್ ಪ್ರದೇಶವನ್ನು ಪ್ರವೇಶಿಸಿದ ನಂತರ, ಯುವಕ ಹಳಿಗಳ ಮೇಲೆ ಹಾರಿ ಸಮೀಪಿಸುತ್ತಿರುವ ರೈಲಿನ ಕೆಳಗೆ ಜಿಗಿದು ಬಿದ್ದಿದ್ದಾನೆ. ಜನಸಂದಣಿ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಯುವಕ ಒಬ್ಬನೆ ಇದ್ದನು. ಇದ್ದಕ್ಕಿದ್ದಂತೆ ಟ್ರ್ಯಾಕ್‌ಗೆ ಹಾರಿ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಯುವಕನ ಸಾವನ್ನು ಆತ್ಮಹತ್ಯೆಯ ಪ್ರಕರಣವೆಂದು ದೃಢೀಕರಿಸಲಾಗಿದೆ ಎಂದು ಹಿರಿಯ ಪೋಲೀಸ್ ಹೇಳಿದರು, ಅಲ್ಲದೇ ಸಾವನ್ನಪ್ಪಿದ ಯುವಕನ ಸ್ನೇಹಿತರ ಬಳಿ ಕೆಲ ಮಾಹಿತಿಗಳನ್ನು ಕಲೆ ಹಾಕಿದ್ದು ಆತ ಸಮಸ್ಯೆಗಳಿಂದ ತೊಂದರೆಗೀಡಾಗಿದ್ದನು‌ ಎಂದು ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೊದಲು ನಾವು ಅವರ ಕುಟುಂಬದೊಂದಿಗೆ ಮಾತನಾಡಬೇಕಾಗಿದೆ ಎಂದು ಪೋಲಿಸರು‌ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Latest News