ಟೊಮ್ಯಾಟೊ ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಆರೋಪಿಯನ್ನು ಗ್ರಾಮದ ಶ್ರೀನಿವಾಸ ಅಲಿಯಾಸ್ ಸೀನಪ್ಪ ಎಂದು ತಿಳಿದು ಬಂದಿದೆ.ಟಮೋಟೋ ತೋಟದ ಒಳ ಭಾಗದಲ್ಲಿ ತೊಗರಿ ಗಿಡಗಳ ಮಧ್ಯದಲ್ಲಿ ಅಲ್ಲಲ್ಲಿ ಗಾಂಜಾಗಿಡಗಳನ್ನು ಬೆಳಸಿದ್ದು ಈ ವಿಚಾರವನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಗಿಡಗಳನ್ನು ಬೆಳೆಸಲು ಯಾವುದಾದರೂ ಪರವಾನಗಿ ಇದಿಯೇ ಎಂದು ವಿಚಾರಣೆ ನಡೆಸಿ ನಂತರ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.
ಇನ್ನೂ ಆರೋಪಿ ಬೆಳೆಸಿರುವ 34 ಗಾಂಜಾ ಗಿಡಗಳನ್ನು, ಒಟ್ಟು ತೂಕ 44 ಕೆ.ಜಿ 12 ಗ್ರಾಂ ತೂಕವಿರುವ 17,64,800 ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.