Odisha Train Accident : ಒಡಿಶಾ ರೈಲು ಅಪಘಾತದಲ್ಲಿ ತನ್ನ ತಾಯಿ ತೀರಿ ಹೋಗಿದ್ದಾರೆ, ಪರಿಹಾರದ ಬದಲಾಗಿ ತನಗೆ ಉದ್ಯೋಗ ನೀಡಬೇಕೆಂದು ಕೇಂದ್ರ ರೈಲ್ವೆ ಸಚಿವರನ್ನು ಕಾಣಲು ಪಾಟ್ನಾದ ಈ ವ್ಯಕ್ತಿ ಬಂದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Viral: ಸರ್ಕಾರಿ ನೌಕರಿ ಗಿಟ್ಟಿಸಲು ತನ್ನ ತಾಯಿ ತೀರಿದ್ದಾರೆಂದು ಸುಳ್ಳು ಹೇಳಿದ ವ್ಯಕ್ತಿಯ ಬಂಧನ

ಪಾಟ್ನಾದ ಸಂಜಯ್ ಕುಮಾರ್

Government Job: ಸರ್ಕಾರಿ ನೌಕರಿಯನ್ನು ಗಿಟ್ಟಿಸಲು ವ್ಯಕ್ತಿಯೊಬ್ಬ ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ಪ್ರಸಂಗ ದೆಹಲಿಯಲ್ಲಿ ನಡೆದಿದೆ. ಇತ್ತೀಚೆಗೆ ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ತನ್ನ ತಾಯಿ ತೀರಿ ಹೋಗಿದ್ದಾರೆಂದು ಇವನು ಅಧಿಕಾರಿಗಳಿಗೆ ಸುಳ್ಳು ಹೇಳಿದ್ದಾನೆ. ಬಾಲ್​ಸೋರ್​ ರೈಲು ಅಪಘಾತದ ನಂತರ ಸರ್ಕಾರಿ ಉದ್ಯೋಗ ಪಡೆಯುವ ಉದ್ದೇಶದಿಂದ ತಾನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav)​ ಅವರನ್ನು ಭೇಟಿ ಮಾಡಲು ದೆಹಲಿಗೆ ಪ್ರಯಾಣಿಸಿದ್ಧಾಗಿ ತಿಳಿಸಿದ್ದಾನೆ. ಈ ಸಂದರ್ಭದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದಾಗ, ಅವನ ತಾಯಿ 2018ರಲ್ಲಿಯೇ ನಿಧನ ಹೊಂದಿದ್ದರ ಮಾಹಿತಿ ಬೆಳಕಿಗೆ ಬಂದಿದೆ. ತತ್ಪರಿಣಾಮವಾಗಿ ಪೊಲೀಸರು ಅವನನ್ನು ಬಂಧಿಸಿದ್ದಾರೆ.

ಈ ವ್ಯಕ್ತಿಯನ್ನು ಪಾಟ್ನಾದ ಸಂಜಯ್ ಕುಮಾರ್ ಎಂದು ಗುರುತಿಲಾಗಿದೆ. ಇವನು ​ ಗುರುವಾರದಂದು ಸಚಿವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಾನೆ. ಆಗ ರೈಲು ಭವನದಲ್ಲಿ ಅವರನ್ನು ಕಾಣಲು ತಿಳಿಸಲಾಗಿದೆ. ಆ ಪ್ರಕಾರ ಅವನು ಸಚಿವರ ಕಚೇರಿಗೆ ತೆರಳಿದ್ಧಾನೆ.  ಅಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಾಗ ಅವನ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ.

Leave a Reply

Your email address will not be published. Required fields are marked *